ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ದಯಾನಂದ(32) ಎನ್ನಲಾಗಿದೆ.
ಮಂಗಳೂರು ನಗರದಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ದಯಾನಂದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಈ ಬಗ್ಗೆ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.