ನೆಲ್ಯಾಡಿ: ಸಿಮೆಂಟ್ ಸಾಗಾಟದ ಲಾರಿ ಹಾಗೂ ಇನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಬ್ಬರು ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾ.ಹೆದ್ದಾರಿಯ ಉದನೆ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.