ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಧಿಸಿದ್ದ ಕೋವಿಡ್ ನಿರ್ಬಂಧಗಳನ್ನು ತೆರವು ಮಾಡಲಾಗಿದ್ದು, ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಈ ಹಿಂದೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.