ಉಪ್ಪಿನಂಗಡಿ: ಬೈಕ್ ಸವಾರರೋರ್ವರಿಗೆ ಗೂಡ್ಸ್ ಟೆಂಪೋ ಡಿಕ್ಕಿಯಾಗಿ ಪರಾರಿಯಾದ ಘಟನೆ 34- ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ನಡೆದಿದೆ.
ಗಾಯಗೊಂಡ ಬೈಕ್ ಸವಾರರನ್ನು ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ಅರ್ಚಕ ಶ್ರೀಕಾಂತ್ ಭಟ್ ಎನ್ನಲಾಗಿದೆ.
ಶ್ರೀಕಾಂತ್ ಭಟ್ ಉಪ್ಪಿನಂಗಡಿ ಕಡೆಯಿಂದ ಪೆರ್ನೆ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಅತೀ ವೇಗದಿಂದ ಹಾಗೂ ನಿರ್ಲಕ್ಷ್ಯ ಚಾಲನೆಯಿಂದ ರಸ್ತೆಯ ವಿರುದ್ಧ ಪಥದಲ್ಲಿ ಬಂದ ಗೂಡ್ಸ್ ಟೆಂಪೋವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಸಂದರ್ಭ ಬೈಕ್ ಸವಾರ ಶ್ರೀಕಾಂತ್ ಭಟ್ ಹಾಗೂ ಬೈಕ್ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟಿದ್ದು, ಬೈಕ್ ಸವಾರನ ಕಾಲು ಮುರಿತಕ್ಕೊಳಗಾಗಿದ್ದು, ಅಪಘಾತವೆಸಗಿದ ಬಳಿಕ ಗೂಡ್ಸ್ ಟೆಂಪೊ ಪರಾರಿಯಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.