ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಫೆ.6 ರಂದು ನಡೆಯಲಿರುವ ಕಾಲಾವಧಿ ಮೆಚ್ಚಿ ಜಾತ್ರೆಯ ಪ್ರಯುಕ್ತ ಫೆ.3 ರಂದು ಚಪ್ಪರ ಮುಹೂರ್ತ ನಡೆಯಿತು.
ಪಳನೀರು ಅನಂತ ಭಟ್ ರವರು ವಿಧಿವಿಧಾನ ನೆರವೇರಿಸಿದರು. ಮಾಣಿಗುತ್ತು ಸಚಿನ್ ರೈ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ ಕೊಡಾಜೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಫೆ.5 ರಂದು ರಾತ್ರಿ ಭಂಡಾರಯೇರಿ ಫೆ.6 ರಂದು ಕಾಲಾವಧಿ ಮೆಚ್ಚಿ ಜಾತ್ರೆ ನಡೆಯಲಿದ್ದು, ಕೋವಿಡ್ ನಿಯಮಾವಳಿಯಂತೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಣಿಗುತ್ತು ಸಚಿನ್ ರೈ ತಿಳಿಸಿದ್ದಾರೆ.