ಮಂಗಳೂರು: ಕಸ್ತೂರಿ ಮಾತ್ರೆ ಮಾರಾಟ ಮಾಡುತ್ತ ಬಂದ ವ್ಯಕ್ತಿಯೋರ್ವ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ನಗರದ ಕೊಳಂಬೆ ಗ್ರಾಮದ ಕಜೆಕೋಡಿ ಹೌಸ್ ಬಳಿ ನಡೆದಿದೆ.
ಆರೋಪಿಯನ್ನು ಮುಲ್ಕಿ ಕೆಂಚನಕೆರೆ ನಿವಾಸಿ ಮೊಹಮ್ಮದ್ ಇಕ್ಬಾಲ್ (52) ಎನ್ನಲಾಗಿದೆ.
ಮೊಹಮ್ಮದ್ ಇಕ್ಬಾಲ್ ಕಜೆಕೋಡಿ ಹೌಸ್ ಎಂಬಲ್ಲಿ ಬೆಳಿಗ್ಗೆ ಕಸ್ತೂರಿ ಮಾತ್ರೆ ಗಳನ್ನು ಮಾರಾಟ ಮಾಡಲು ಬಂದಿದ್ದು, ಈ ವೇಳೆ ಮಹಿಳೆಯ ಕೈ ಹಿಡಿದು ಎಳೆದಾಡಿ ಮಾನಭಂಗ ಮಾಡಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.