ಬೆಳ್ತಂಗಡಿ: ವ್ಯಕ್ತಿಯೊಬ್ಬರು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಳದಂಗಡಿಯಲ್ಲಿ ನಡೆದಿದೆ.
ಮೃತರನ್ನು ಕಡಬ ಮೂಲದ ದಿನೇಶ್ ಎನ್ನಲಾಗಿದೆ.
ದಿನೇಶ್ ಹಲವು ವರ್ಷಗಳ ಕಾಲ ಬೆಳ್ತಂಗಡಿಯ ಡಿ ಕೆ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಉದ್ಯೋಗದಲ್ಲಿದ್ದು, ಅನಂತರ ಅಳದಂಗಡಿಯಲ್ಲಿ ಹೋಟೆಲ್ ಒಂದನ್ನು ನಡೆಸುತ್ತಿದ್ದರು.
ಅವರ ಕುಟುಂಬದ ಬಗ್ಗೆ ಯಾವುದೇ ರೀತಿಯ ಮಾಹಿತಿ ತಿಳಿದು ಬಂದಿಲ್ಲ. ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದೆ.