ವಿಟ್ಲ: ಮದುಮಗ ಕೊರಗಜ್ಜನ ವೇಷ ಧರಿಸಿ ಬಂದ ಪ್ರಕರಣವೊಂದು ತಿಂಗಳ ಹಿಂದೆ ಕರಾವಳಿಯಲ್ಲಿ ಭಾರೀ ಸದ್ದು ಮಾಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಷ ಧರಿಸಿ ಬಂದ ಮದುಮಗ ಉಮರುಲ್ ಭಾಷಿತ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ನಡೆದು ಒಂದು ತಿಂಗಳು ಕಳೆಯುತ್ತ ಬಂದಿದ್ದು, ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಾ ತಲೆಮರೆಸಿಕೊಂಡಿರುವ ಆರೋಪಿ ಭಾಷಿತ್ ಕಡೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ದಿನ ಈ ಘಟನೆ ನಡೆದಿದ್ದು, ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನ ಅಝೀಝ್ ಪುತ್ರಿಯ ವಿವಾಹ ಮಧ್ಯಾಹ್ನ ನಡೆದಿದ್ದು, ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ (ತಾಳ) ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿಕೊಂಡು ವರ ಆಗಮಿಸಿದ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವಂತಿದೆ ಎಂದು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.