ಪುತ್ತೂರು: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು, ಶ್ರೀಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ತು ಹಾಗೂ ಶ್ರೀ ಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರಸಹಕಾರದೊಂದಿಗೆ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಅಷ್ಟಬಂಧಬ್ರಹ್ಮಕಲಶೋತ್ಸವದಲ್ಲಿ ನಡೆಯಲಿರುವ ಭಜನಾಮೃತಕಾರ್ಯಕ್ರಮದ ಪೂರ್ವಭಾವಿ ಸಭೆ ಬ್ರಹ್ಮಕಲಶೋತ್ಸವಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈಯವರಅಧ್ಯಕ್ಷತೆಯಲ್ಲಿ ದೇವಾಲಯದ ಚಿನ್ಮಯೀ ಸಭಾಂಗಣದಲ್ಲಿಮಾ.13ರಂದು ನಡೆಯಿತು.
ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಅಧ್ಯಕ್ಷ ಸುಬ್ಬಯ್ಯ ರೈ, ಸಂಚಾಲಕ ಶಶಿಕುಮಾರ್ ರೈ ಬಾಳ್ಕೊಟ್ಟು, ಕಡಬ ತಾಲೂಕಿನ ಭಜನಾ ಪರಿಷತ್ತಿನ ಕಾರ್ಯದರ್ಶಿ ಸದಾನಂದ ಆಚಾರ್ಯಕಾಣಿಯೂರು, ಬ್ರಹ್ಮಕಲಶೋತ್ಸವದ ಸಮಿತಿಯ ಪಧಾದಿಕಾರಿಗಳು ಹಾಗೂ ಭಜನಾ ಸಮಿತಿಯಪಧಾದಿಕಾರಿಗಳು ಉಪಸ್ಥಿತರಿದ್ದರು.
ಮಾ.17ರಂದು ಮಹಾಲಿಂಗೇಶ್ವರ ದೇವಳದಲ್ಲಿ ಪೂರ್ವಭಾವಿ ಸಭೆ
ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯಲಿರುವ ಭಜನಾಮೃತ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಾ.17ರಂದು ಬೆಳಿಗ್ಗೆ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ ಮತ್ತು ಬಂಟ್ವಾಳತಾಲೂಕಿನ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆಎಂದು ಪ್ರಕಟಣೆ ತಿಳಿಸಿದೆ.