ವಿಟ್ಲ: ಗೃಹರಕ್ಷಕ ದಳದ ಸಿಬ್ಬಂದಿಯೋರ್ವರು ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೈಲಿ ಗಲ್ಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಗೋಳ್ತಮಜಲು ಬಳಿಯ ಹಜಾಜ್ ಫ್ಯಾಕ್ಟರಿ ಬಳಿ ನಡೆದಿದೆ.
ಮೃತರನ್ನು ಅಳಿಕೆಯ ಪ್ರಕಾಶ್(36) ಎನ್ನಲಾಗಿದೆ.ಪ್ರಕಾಶ್ ರವರು ಕಲ್ಲಡ್ಕದಿಂದ ವಿಟ್ಲ ಕಡೆ ಬರುತ್ತಿದ್ದ ವೇಳೆ ದಾರಿ ಮಧ್ಯೆ ಗೋಳ್ತಮಜಲು ಎಂಬಲ್ಲಿ ಆಕ್ಟಿವಾ ಮೈಲಿ ಗಲ್ಲಿಗೆ ಡಿಕ್ಕಿ ಹೊಡೆದಿದ್ದು, ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಮಕ್ಕಳು ಮತ್ತು ಬಂಧು-ಮಿತ್ರರನ್ನು ಅಗಲಿದ್ದಾರೆ.