ಬಂಟ್ವಾಳ: ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಹೊಟೇಲ್‌ಗೆ ನುಗ್ಗಿ ಕಂದಕಕ್ಕೆ ಉರುಳಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ನಿನ್ನೆ ರಾತ್ರಿ ಮಂಗಳೂರು ಕಡೆಯಿಂದ ಉಪ್ಪಿನಂಗಡಿ ಕಡೆ ಸಾಗುತ್ತಿದ್ದ ಸಾಗುತ್ತಿದ್ದ ಇಂಡಿಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಟೇಲ್ ಒಳಗೆ ನುಗ್ಗಿದೆ. ಈ ವೇಳೆ ಹೊಟೇಲ್‌ನಲ್ಲಿದ್ದ ಮಾಲಕ ರಿಯಾಝ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಲ್ಲಿ ಮೂವರು ಹೊಟೇಲ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.