ಬಂಟ್ವಾಳ: ಕಾರು ಹಾಗೂ ಆಟೋ ರಿಕ್ಷಾ ಮಧ್ಯೆ ಭೀಕರ ಅಪಘಾತ ಸಂಭವಿಸಿ, ಮಹಿಳೆಯೊಬ್ಬರು ಆಟೋದಿಂದ ಹೊರಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಅಮ್ಟೂರು ಸಮೀಪದ ಸುಬ್ಬಕೋಡಿಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕಲ್ಲಡ್ಕ ಮುರಬೈಲು ನಿವಾಸಿ ದೇವಕಿ(70) ಎನ್ನಲಾಗಿದೆ.
ಘಟನೆಯಲ್ಲಿ ಆಟೋ ಚಾಲಕ ಭೋಜ ಮೂಲ್ಯ ಗಾಯಗೊಂಡಿದ್ದು, ಎರಡೂ ವಾಹನಗಳು ಜಖಂಗೊಂಡಿವೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯವಾಗಿಲ್ಲ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.