ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿನಿಯರಿಗೆ ಶಿರವಸ್ತ್ರ( ಹಿಜಾಬ್) ಧರಿಸಲು ಅವಕಾಶ ನಿರಾಕರಿಸುತ್ತಿರುವುದನ್ನು ಖಂಡಿಸಿ ಮಹಿಳಾ ಹಕ್ಕುಗಳ ಹಿತರಕ್ಷಣಾ ವೇದಿಕೆಯ ವತಿಯಿಂದ ಫೆ.7 ರಂದು ಉಪ್ಪಿನಂಗಡಿಯಲ್ಲಿ ಪ್ರತಿಭಟನೆ ನಡೆಯಿತು.
ಬಸ್ ನಿಲ್ದಾಣ ಬಳಿಯ ವೃತ್ತದ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯ ವೇಳೆ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮಹಿಳಾ ಹಕ್ಕುಗಳ ಹಿತರಕ್ಷಣಾ ವೇದಿಕೆಯ ಫಾಹಿನ ಹಾಗೂ ಮತ್ತಿತರರು ಉಪಸ್ಥಿತರಿದ್ದರು.