ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಪುತ್ತೂರಿನ ಅಂಬಿಕಾ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಬಾಲವನದ ಈಜುಕೊಳದಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಶ್ರೀನಿಧಿ ಡಿ.ಕೆ ಒಂದು ಚಿನ್ನ , ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕವನ್ನು ಪಡೆದಿದ್ದಾರೆ. ಇತನು200 ಮೀಟರ್ ಬ್ಯಾಕ್‌ಸ್ಟ್ರೋಕ್ ನಲ್ಲಿ ಚಿನ್ನ ,400ಮೀಟರ್ ಫ್ರಿಸ್ಟೈಲ್ ನಲ್ಲಿ ಬೆಳ್ಳಿ ಪದಕ, 200ಮೀಟರ್ ಫ್ರಿಸ್ಟೈಲ್ ನಲ್ಲಿ ಕಂಚಿನ ಪದಕವನ್ನು ಗಳಿಸಿರುತ್ತಾನೆ.
ಈತನು ಬನ್ನೂರಿನ ದಾಮೋದರ ಕೆ.ಎ ಮತ್ತು ಸುಪ್ರಭ ದಂಪತಿಗಳ ಪುತ್ರ. ಈತನು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾನೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.