ಪುತ್ತೂರು: ಬ್ಲಾಕ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಫೆ.8 ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರು ನೆರವೇರಿಸಲಿದ್ದಾರೆ.
ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ. ವಿಶ್ವನಾಥ ರೈ, ಕೆಪಿಸಿಸಿ ಹಿಂದುಳಿದ ವರ್ಗ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಗಣೇಶ್ ಪೂಜಾರಿ, ಕೆಪಿಸಿಸಿ ಹಿಂದುಳಿದ ವರ್ಗ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಗಳಾದ ಉಷಾ ಅಂಚನ್ ರವರು ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.