ಕಡಬ: ಕೊಂಬಾರಿನಲ್ಲಿರುವ ಎಸ್ಟೇಟ್ ನಲ್ಲಿ ಅಕ್ರಮ ಕಾಡು ಪ್ರಾಣಿಗಳ ಹತ್ಯೆ ಮತ್ತು ಜಾನುವಾರು ಹತ್ಯೆಯಾಗುತ್ತಿದೆ ಎಂಬ ಮಾಹಿತಿಯ ಮಧ್ಯೆಯೇ ಫೆ.7 ರಂದು ಎಸ್ಟೇಟ್ ಒಳಗಿನಿಂದ ನಾಯಿಗಳು ಪ್ರಾಣಿಗಳ ಮೂಳೆಯನ್ನು ಕಚ್ಚಿಕೊಂಡು ಹೊರಗೆ ತಂದಿದ್ದು, ಇದನ್ನು ಗಮನಿಸಿದ ಸಾರ್ವಜನಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಡಬ ಎಸ್.ಐ. ರುಕ್ಮ ನಾಯ್ಕ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಎಸ್ಟೇಟ್ ಮಾಲಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಈ ಎಸ್ಟೇಟ್ ಒಳಗಡೆ ನಿರಂತರ ಕಾಡು ಪ್ರಾಣಿಗಳ ಹತ್ಯೆ ಮಾಡಲಾಗುತ್ತಿದೆ, ಅಲ್ಲದೆ ಜಾನುವಾರು ಹತ್ಯೆ ಮಾಡುತ್ತಿರುವ ಬಗ್ಗೆ ಈ ಹಿಂದೆ ಸಾಕಷ್ಟು ದೂರುಗಳು ಕೇಳಿ ಬರುತ್ತಿತ್ತು, ಇದಕ್ಕೆ ಪೂರಕವೆಂಬಂತೆ ನಾಯಿಯೊಂದು ಪ್ರಾಣಿಗಳ ಅಸ್ಥಿಪಂಜರವನ್ನು ಎಸ್ಟೇಟ್ ಹೊರಗೆ ತಂದಿತ್ತು, ಇದನ್ನು ಗಮನಿಸಿದ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.