ಉಡುಪಿ: ಕರಾವಳಿಯಾದ್ಯಂತ ಹಿಜಾಬ್, ಕೇಸರಿ ಶಾಲು ವಿವಾದ ಜೋರಾಗಿದ್ದು, ಹೈಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ ನಡೆಯಲಿರುವ ಮಧ್ಯೆ ಎಂಜಿಎಂ ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬಂದರೆ , ವಿದ್ಯಾರ್ಥಿಗಳು ಕೇಸರಿ ಪೇಟ, ಶಾಲಿನೊಂದಿಗೆ ಕಾಲೇಜಿಗೆ ಆಗಮಿಸಿದ್ದು, ಉದ್ವಿಗ್ವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್ ಧರಿಸಿ ಬಂದಿದ್ದು, ವಿದ್ಯಾರ್ಥಿಗಳು ಕೇಸರಿ ಪೇಟ, ಕೇಸರಿ ಶಾಲು ತೊಟ್ಟು ಕಾಲೇಜಿಗೆ ಬಂದಿದ್ದಾರೆ. ಆಡಳಿತ ಮಂಡಳಿಯು ಗೇಟ್ ಬಂದ್ ಮಾಡಿ ಕಾಲೇಜು ಪ್ರವೇಶಕ್ಕೆ ತಡೆ ನೀಡಿದೆ.
ರೆಸ್ಟ್‌ರೂಮ್ ನಲ್ಲಿ ಬುರ್ಖಾ ತೆಗೆದಿರಲು ಕಾಲೇಜು ಸೂಚನೆ ನೀಡಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ ನೀಡಿದ್ರೆ ನಮಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಿ ಅಂತ ಒತ್ತಾಯಿಸಿದ್ದು, ಹಿಜಾಬ್ ನಮ್ಮ ಹಕ್ಕು ಎಂದು ಘೋಷಣೆ ಕೂಗುತ್ತಾ ಮುಸ್ಲಿಂ ವಿದ್ಯಾರ್ಥಿನಿಯರ ಪ್ರತಿಭಟನೆ ನಡೆಸುತ್ತಿದ್ದು, ಕಾಲೇಜು ಆವರಣ ಒಳಗಡೆ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಪ್ರಾಂಶುಪಾಲ ಡಾ. ದೇವಿದಾಸ್ ನಾಯಕ್ ಆಗಮಿಸಿದ್ದು, ಪ್ರಾಧ್ಯಾಪಕರು ಕೂಡ ವಿದ್ಯಾರ್ಥಿಗಳ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.
ರಾಜ್ಯಾದ್ಯಂತ ಹಿಜಾಬ್ ಧರಿಸುವ ಹಕ್ಕಿಗಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 8 ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಪ್ರಕರಣದ ವಿಚಾರಣೆ ಆರಂಭವಾಗಲಿದೆ.