ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಪಳ್ಳತ್ತೂರು ಸಮೀಪದ ವಿವಾಹಿತ ವ್ಯಕ್ತಿ ಕಿರುಕುಳ ನೀಡುತ್ತಿರುವ ಕುರಿತು ಆರೋಪ ವ್ಯಕ್ತವಾಗಿದ್ದು, ವಿದ್ಯಾರ್ಥಿನಿ ವ್ಯಕ್ತಿಯ ವಿರುದ್ದ ಪೊಲೀಸರಿಗೆ ದೂರು ನೀಡಿದ್ದಾಳೆ ಎಂದು ತಿಳಿದು ಬಂದಿದೆ.
ವಿವಾಹಿತ ವ್ಯಕ್ತಿಯೋರ್ವ ಹಲವು ಬಾರಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದು, ಫೆ.7 ರಂದು ಪುತ್ತೂರು ಬಸ್ ನಿಲ್ದಾಣದಲ್ಲಿ ಚೀಟಿಯೊಂದನ್ನು ನೀಡಿ ವಿವಾಹವಾಗುವಂತೆ ಒತ್ತಾಯಿಸಿರುವುದಾಗಿ ಆರೋಪಿಸಲಾಗಿದೆ.
ಈ ಕುರಿತು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾಳೆ ತಿಳಿದು ಬಂದಿದೆ.