ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ಡಾ.ಶಿವಕುಮಾರ್ ಅವರನ್ನು ಐಪಿಎಸ್ ಆಗಿ ಭಡ್ತಿ ನೀಡಿದ್ದು, ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಖಾಲಿ ಇರುವ ಜಾಗಕ್ಕೆ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿದ್ದ ಕುಮಾರ್ ಚಂದ್ರ ಅವರನ್ನು ನೇಮಕ ಮಾಡಲಾಗಿದ್ದು, ಕುಮಾರ್ ಚಂದ್ರ ಮಂಗಳೂರು ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿಕೊಂಡರು.
ಕುಮಾರು ಚಂದ್ರ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ನಿವಾಸಿಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷದಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿದ್ದರು.
ಇನ್ನೂ ಕುಮಾರ್ ಚಂದ್ರ ಮಂಗಳೂರು ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳು ಬಂದು ಹೂಗುಚ್ಚ ನೀಡಿ ಶುಭ ಹಾರೈಸಿದರು.