ಬೆಂಗಳೂರು: ಹಿಜಾಬ್ ವಿವಾದ ತಾರಕಕ್ಕೆರಿರುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಪದವಿ ಕಾಲೇಜಿಗಳಿಗೆ ಮೂರು ದಿನಗಳ ಕಾಲ ರಜೆಯನ್ನು ಘೋಷಿಸಿ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತನಾರಾಯಣ ಆದೇಶಿಸಿದ್ದಾರೆ.
ಉಡುಪಿ, ಕುಂದಾಪುರ, ಭದ್ರಾವತಿ, ಬೆಳಗಾವಿ, ವಿಜಯಪುರ, ಚಿಕ್ಕಮಗಳೂರಿನ ಕೊಪ್ಪ ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ತೀವ್ರ ಸ್ವರೂಪ ಪಡೆದುಕೊಂಡಿದೆ.
ಇನ್ನೊಂದೆಡೆ ಹಿಜಾಬ್ ವಿವಾದವು ಹೈಕೋರ್ಟ್ ಮೆಟ್ಟಿಲೇರಿದ್ದು ವಾದ ಪ್ರತಿವಾದ ನಡೆಯುತ್ತಿದ್ದು ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಇನ್ನು ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಶಿಕ್ಷಕರು ಮತ್ತು ಶಾಲಾ ಕಾಲೇಜುಗಳ ನಿರ್ವಹಣೆ ಮತ್ತು ಕರ್ನಾಟಕದ ಜನರಿಗೆ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಕಾಲ ಎಲ್ಲಾ ಪ್ರೌಢ ಶಾಲಾ ಕಾಲೇಜುಗಳನ್ನು ಮುಚ್ಚಲು ನಾನು ಆದೇಶಿಸಿದ್ದೇನೆ. ಸಂಬಂಧಪಟ್ಟ ಎಲ್ಲರೂ ಸಹಕರಿಸುವಂತೆ ಕೋರಲಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.