ಪುತ್ತೂರು: ಬ್ಲಾಕ್ ಕಾಂಗ್ರೆಸ್ ನಿಯೋಗದ ವತಿಯಿಂದ ಹಿರಿಯ ಕಾಂಗ್ರೆಸ್ಸಿಗರು, ಪುತ್ತೂರು ತಾಲೂಕು ಬೋರ್ಡ್‌ನ ಮಾಜಿ ಸದಸ್ಯರಾಗಿರುವ ಚಿಕ್ಕಪ್ಪ ನಾಯ್ಕ್ ರವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶಕುಂತಳಾ ಟಿ.ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ನಗರ ಕಾಂಗ್ರೆಸ್ ಅಧ್ಯಕ್ಷ ಎಚ್.ಮಹಮ್ಮದ್ ಆಲಿ, ಬ್ಲಾಕ್ ಕಾರ್ಮಿಕ ಕಾಂಗ್ರೆಸ್ ಅಧ್ಯಕ್ಷ ಶರೂನ್ ಸೀಕ್ವೆರಾ ಮತ್ತು ಪ್ರ.ಕಾರ್ಯದರ್ಶಿ ಅಮಳ ರಾಮಚಂದ್ರ ಉಪಸ್ಥಿತರಿದ್ದರು.