ಬೆದ್ರೋಡಿ: ಸಿಮೆಂಟ್ ಸಾಗಾಟದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಹೋದ ಘಟನೆ ಮಂಗಳೂರು-ಬೆಂಗಳೂರು ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಬೆದ್ರೋಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಘಟನೆಯಿಂದ ಲಾರಿ ಸಂಪೂರ್ಣ ಸುಟ್ಟುಹೋಗಿದೆ ಎಂದು ತಿಳಿದು ಬಂದಿದೆ.