ನಾಗಪಟ್ಟಣ: ಗೆಸ್ಟ್ ಹೌಸ್ ಬಳಿಯ ತಿರುವಿನಲ್ಲಿ ಚಾಲಕನ ಅತೀ ವೇಗದ ಚಾಲನೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಪೋಲಿಸ್ ವಿಚಾರಣೆ ಸಂದರ್ಭ ಘಟನೆ ನಡೆದ ಸ್ಥಳದಲ್ಲಿ ಸೇರಿದ ಸ್ಥಳೀಯ ಹಿಂದೂ ಸಂಘಟನೆಯ ನಾಲ್ಕು ಮಂದಿ ಯುವಕರ ವಿರುದ್ಧ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿರುವುದಾಗಿ ತಿಳಿದು ಬಂದಿದೆ.
ಸೋಮವಾರಪೇಟೆ ಮೂಲದ ಅನ್ಯಕೋಮಿನ ಯುವಕ ಮತ್ತು ಯುವತಿ ಇವರಿಬ್ಬರು ಕೇರಳದ ಬಂದಡ್ಕ ಕಡೆಯಿಂದ ಕಾರಿನಲ್ಲಿ ಕೋಲ್ಚಾರು ಮಾರ್ಗವಾಗಿ ಬರುತ್ತಿದ್ದಾಗ ಘಟನೆ ನಡೆದಿದ್ದು ಕಾರು ಪಲ್ಟಿಯಾದ ಜಾಗದಲ್ಲಿ ನೂರಾರು ಮಂದಿ ಜಮಾಯಿಸಿದ್ದರು.
ಈ ಸಂದರ್ಭ ಅಲ್ಲಿ ಸೇರಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಲ್ಲೆ ನಡೆಸಿದ ಯುವಕರ ಹೆಸರು ತಿಳಿದು ಬಂದಿಲ್ಲ. ಸುದ್ದಿ ತಿಳಿದ ಪೋಲಿಸರು ಅವರಿಬ್ಬರನ್ನು ಠಾಣೆಗೆ ಕರೆತಂದು ವಿಚಾರಿಸಿದಾಗ ಘಟನೆ ಬಗ್ಗೆ ತಿಳಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಅಪಘಾತವಾದ ಸಂದರ್ಭದಲ್ಲಿ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ. ಅವರನ್ನು ನೋಡಿದಲ್ಲಿ ಗುರುತು ಹಿಡಿಯುತ್ತೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಘಟನೆ ಬಗ್ಗೆ ಪೋಲಿಸರು ದೂರು ದಾಖಲಿಸಿಕೊಂಡಿದ್ದು ನಾಲ್ಕು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಿಕೊಂಡಿರುವುದಾಗಿ ತಿಳಿದು ಬಂದಿದೆ.