ವಿಟ್ಲ: ಕೇಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಕ್ಕೆಬೆಟ್ಟು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ಕೇಪು ಗ್ರಾಮ ಪಂಚಾಯತ್ ಅನುದಾನದಲ್ಲಿ ಆರಂಭಿಸಲಾಯಿತು.
ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ತಾರಾನಾಥ ಆಳ್ವ ಕುಕ್ಕೆಬೆಟ್ಟು, ಪಂಚಾಯತ್ ಸದಸ್ಯರಾದ ಜಗಜ್ಜೀವನ್ ರಾಮ್ ಶೆಟ್ಟಿ, ಪುರುಷೋತ್ತಮ ಕಲ್ಲಂಗಳ, ಮೋಹಿನಿ ಕುಕ್ಕೆಬೆಟ್ಟು ಪ್ರಮುಖರಾದ ಸತೀಶ್ ಸುವರ್ಣ, ವಿಠಲ ಶೆಟ್ಟಿ, ಕೇಶವ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.