ಪುತ್ತೂರು: ನಗರ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಫೆ.12 ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿ ಮೇಲ್ಚಾವಣಿಯಲ್ಲಿ ನಡೆಯಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಆಲಿ ತಿಳಿಸಿದ್ದಾರೆ.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ದಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕ, ಮಾಜಿ ಸಚಿವ ಯು.ಟಿ ಖಾದರ್, ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮಾಜಿ ಶಾಸಕ ಜೆ ಆರ್ ಲೋಬೊ, ಕೆ.ಪಿ.ಸಿ.ಸಿ. ಸಂಯೋಜಕರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳಾದ ಟಿ ಸಿ ರಮೇಶ್, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ, ಕೆಪಿಸಿಸಿ ಸದಸ್ಯರಾದ ಡಾ. ರಘು ಬೆಳ್ಳಿಪ್ಪಾಡಿ, ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಲಾರೆನ್ಸ್ ಡಿಸೋಜಾ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ರಾಜಾರಾಮ್ ಕೆಬಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ್, ರಾಜ್ಯ ಯಂಗ್ ಬ್ರಿಗೇಡ್ ಸೇವಾದಳದ ಅಧ್ಯಕ್ಷ ಜುನೈದ್ ಪಿ.ಕೆ., ದಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶಾಲೆಟ್ ಪಿಂಟೋ, ಜಿಲ್ಲಾ ಎನ್‌ಎಸ್‌ಯುಐ ಘಟಕದ ಅಧ್ಯಕ್ಷ ಸವಾದ್ ಸುಳ್ಯ ಸೇರಿದಂತೆ ಅನೇಕ ಮುಖಂಡರುಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




























