ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 2020 ರ ಎ.1 ರಂದು ಕೋವಿಡ್ ಸಂದರ್ಭದಲ್ಲಿ ಸಾಂಪ್ರದಾಯಿಕ ಜಾತ್ರೆಗೆ ನಡೆದ ಗೊನೆ ಮುಹೂರ್ತದ ವಿಡಿಯೋವನ್ನು ವಿದೇಶದಲ್ಲಿದ್ದ ಪುತ್ತೂರಿನ ವ್ಯಕ್ತಿಯೋರ್ವ ಖಾಸಗಿ ಚಾನೆಲ್ ನ ಲೋಗೊ ಬಳಸಿ ಎಡಿಟ್ ಮಾಡಿ ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ತಿಳಿದು ಬಂದಿದೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನೆಯ ನಿವೃತಿ ರಾಶಿಯ ದಿನವೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೇವಳದ ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ ರವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ವಿದೇಶದಲ್ಲಿದ್ದು ಆತನ ವಿರುದ್ದ ಎಲ್ ಒ ಸಿ ಮಾಡಲಾಗಿತ್ತು. ಇದೀಗ ಆತ ವಿದೇಶದಿಂದ ವಾಪಾಸಾಗುತ್ತಿದ್ದ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದು ಕೊಂಡಿದ್ದಾರೆ ಎಂದು ತಿಳಿದು ಬಂದಿದೆ.