ಕಡಬ: ಹಿರಿಯ ಛಾಯಾಗ್ರಾಹಕ, ಕಡಬ ವರ್ತಕ ಸಂಘದ ಅಧ್ಯಕ್ಷ ಶಿವರಾಮ ಎಂ.ಎಸ್. ರವರು ಫೆ.11ರಂದು ನಿಧನರಾದರು.
ಶಿವರಾಮ ರವರು ಕಡಬದಲ್ಲಿ ಪ್ರಥಮವಾಗಿ ಪೋಟೋ ಸ್ಟುಡಿಯೋ ಪ್ರಾರಂಭಿಸಿ, ದ.ಕ.ಜಿಲ್ಲಾ ಫೋಟೋಗ್ರಾಫರ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರು ಆಗಿ ಕಾರ್ಯನಿರ್ವಹಿಸಿದ್ದರು.
ಜೇಸಿ, ಲಯನ್ಸ್ ಸೇರಿದಂತೆ ವಿವಿಧ ಸಂಘಸಂಸ್ಥೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಅವರು ಕಳೆದ ಹಲವಾರು ವರ್ಷಗಳಿಂದ ಕಡಬ ವರ್ತಕ ಸಂಘದ ಅಧ್ಯಕ್ಷರಾಗಿದ್ದರು.
ಮೃತರು ಪತ್ನಿ ಕಡಬ ಗ್ರಾ.ಪಂ.ಮಾಜಿ ಅಧ್ಯಕ್ಷೆ ನೀಲಾವತಿ ಶಿವರಾಮ್, ಹಾಗೂ ಪುತ್ರಿಯನ್ನು ಅಗಲಿದ್ದಾರೆ.