ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಫೆ.12 ರಂದು ಮದ್ಯಾಹ್ನ ಪರ್ಲಡ್ಕ ಡಾ. ಶಿವರಾಮ ಕಾರಂತರ ಬಾಲವನದ ಬಯಲು ರಂಗಮಂದಿರದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ರವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ರವರು ವಹಿಸಲಿದ್ದಾರೆ.
ಪುತ್ತೂರು ಶಾಸಕರಾದಂತಹ ಸಂಜೀವ ಮಠಂದೂರು ರವರು ಶ್ರೀ ಮಹಾಲಿಂಗೇಶ್ವರ ದೇವಳದ ಧಾರ್ಮಿಕ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರ ಮಾಡಲಿದ್ದಾರೆ.
ಬೆಥನಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ದೀಪ್ತಿ ಬಿ. ರವರ ‘ಹೊಂಗನಸು’ ಕವನ ಸಂಕಲನವನ್ನು ಪುತ್ತೂರಿನ ಉಪವಿಭಾಗಾಧಿಕಾರಿಯಾಗಿದ್ದ ಡಾ. ಯತೀಶ್ ಉಳ್ಳಾಲ್ ರವರು ಬಿಡುಗಡೆಗೊಳಿಸಲಿದ್ದು, ಎಸ್. ಜಿ. ಕೃಷ್ಣ ರವರ ‘ದೇವರು ಇಲ್ಲೇ ಇದ್ದಾನೆ’ ಕೃತಿಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ರವರು ಅನಾವರಣಗೊಳಿಸಲಿದ್ದಾರೆ.