ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಪಿಯುಸಿ ಕಾಲೇಜುಗಳ ಆರಂಭದ ಕುರಿತು ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯದಲ್ಲಿ ಪಿಯುಸಿ ಕಾಲೇಜು ಪುನಾರಂಭದ ಕುರಿತಂತೆ ಸೋಮವಾರ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಮಾಡಲಾಗುವುದು ಎಂದರು.
ಇನ್ನು ಸೋಮವಾರದಿಂದ ಪ್ರೌಢಶಾಲೆಗಳು ಪ್ರಾರಂಭವಾಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿ ಗಳು ಭೇಟಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.