ಪುತ್ತೂರು: ಸೈಕಲ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಸೈಕಲ್ ಸವಾರ ಸಾವನ್ನಪ್ಪಿದ ಘಟನೆ ಕೆಮ್ಮಿಂಜೆ ಶ್ರೀ ಮಹಾವಿಷ್ಣು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ನಡೆದಿದೆ.
ಮೃತ ಸೈಕಲ್ ಸವಾರನನ್ನು ಕೆಮ್ಮಿಂಜೆ ನಿವಾಸಿ ಚಿದಾನಂದ ಎನ್ನಲಾಗಿದೆ.
ಚಿದಾನಂದ ರವರು ಕೆಮ್ಮಿಂಜೆ ದೇವಸ್ಥಾನದ ಕಡೆ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
























