ಪುತ್ತೂರು: ಬನ್ನೂರು ಕಟ್ಟೆ ನಿವಾಸಿ ಮೋಹನ್ ನಾಯ್ಕ್ ಎಂಬವರ ಪುತ್ರ ಕೀರ್ತನ್(33) ಫೆ.12 ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಆಗಿ ಕೆಲಸ ನಿರ್ವಹಿಸುತ್ತಿದ್ದ ಕೀರ್ತನ್ ರವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ತಂದೆ ಮೋಹನ್ ನಾಯ್ಕ್, ತಾಯಿ ಜ್ಯೋತಿ, ಸಹೋದರ ಶಿವ ರನ್ನು ಅಗಲಿದ್ದಾರೆ.