ವಿಟ್ಲ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲದ ಬೊಬ್ಬೆಕೇರಿಯಲ್ಲಿ ನಡೆದಿದೆ.
ವಿಟ್ಲ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದಿಂದಾಗಿ ರಿಕ್ಷಾದ ಮುಂಭಾಗದ ಗ್ಲಾಸ್ ಹುಡಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.