ಮಂಗಳೂರು: ನಗರ ಹೊರವಲಯದ ದೇರಳಕಟ್ಟೆ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಮೃತರನ್ನು ಉಪ್ಪಿನಂಗಡಿ ನಿವಾಸಿ ನಾಗೇಶ್(23) ಎನ್ನಲಾಗಿದೆ.
ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಇವರು ಕರ್ತವ್ಯನಿರತರಾಗಿದ್ದು, ಬಳಿಕ ತಮ್ಮ ಕೊಠಡಿಗೆ ಹೋಗಿ ನಿದ್ರಿಸಿದ್ದರು. ಆದರೆ ಮಲಗಿದ್ದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಿಸಲಾಗಿದೆ.