ಪುತ್ತೂರು: ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಫೆ.14 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ಮೃತರನ್ನು ಈಶ್ವರಮಂಗಲ ಸಂಜನ್ಕಾಡಿ ನಿವಾಸಿ, ಆಟೋ ಚಾಲಕ ವಿನಯ್ ಕುಮಾರ್(23) ಎನ್ನಲಾಗಿದೆ.
ವಿನಯ್ ಕೆಲದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರು ತಾಯಿ ಕಮಲ, ತಮ್ಮ ನವೀನ್ ಕುಮಾರ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.