ಕಾಸರಗೋಡು: ಆರ್.ಎಸ್. ಎಸ್. ಸಕ್ರಿಯ ಕಾರ್ಯಕರ್ತ ಅಣಂಕೂರು ಜೆಪಿ ಕಾಲೋನಿಯ ಜ್ಯೋತಿಶ್ (35) ಎಂಬುವರು ಮನೆಯ ಮೇಲ್ಛಾವಣಿಯಲ್ಲಿ ಪ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಜ್ಯೋತಿಶ್ ರವರ ತಂದೆ ಜ್ಯೋತಿಶ್ ರೂಮ್ ನಲ್ಲಿ ನೇಣು ಬಿಗಿದುಕೊಂಡಿರುವುದನ್ನು ನೋಡಿದ್ದು, ಕೂಡಲೇ ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ದರೂ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು,ಸಾವಿಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.