ಪುತ್ತೂರು: ಐತಿಹಾಸಿಕ ಹಿನ್ನಲೆಯುಳ್ಳ ಕಾರಣಿಕ ಪ್ರಸಿದ್ದ ಕ್ಷೇತ್ರ ಕಲ್ಲೇಗ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಫೆ.15 ರಂದು ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದೆ.
ಫೆ.15 ರಂದು ರಾತ್ರಿ ಶ್ರೀ ದೈವಗಳ ಮೂಲನೆಲೆ ಕಾರ್ಜಾಲು ಗುತ್ತಿನಿಂದ ಭಂಡಾರ ಹೊರಟು ನಂತರ ಗೊದೊಳು ಪೂಜೆ, ಶ್ರೀ ಕಲ್ಕುಡ ಕಲ್ಲುರ್ಟಿ ದೈವಗಳ ವರ್ಷಾವಧಿ ನೇಮೋತ್ಸವ ನಡೆಯಲಿದೆ ಎಂದು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಜಿತ್ ಕುಮಾರ್ ಕಲ್ಲೇಗ ತಿಳಿಸಿದ್ದಾರೆ.