ಬಂಟ್ವಾಳ: ಕಾರು ಮತ್ತು ದ್ವಿ ಚಕ್ರ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ಸೋಮವಾರ ರಾತ್ರಿ ವೇಳೆ ನಡೆದಿದೆ.
ಕುಮ್ಡೇಲು ನಿವಾಸಿ ಸನ್ವಿತ್ (23) ಮೃತಪಟ್ಟ ದುರ್ದೈವಿ.
ಸಜೀಪ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯುವಕ ತೆರಳುತ್ತಿದ್ದ ವೇಳೆ ಕೊಣಾಜೆ ಕಡೆಯಿಂದ ಬರುತ್ತಿದ್ದ ಕಾರು ನೇರವಾಗಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತದ್ದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.