ಬೆಳ್ಳಾರೆ: ರಬ್ಬರ್ ಸಾಗಾಟದ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪಂಜಿಗಾರ್ ಎಂಬಲ್ಲಿ ನಡೆದಿದೆ.
ಬೆಳ್ಳಾರೆಯಿಂದ ಪಂಜ ಕಡೆ ರಬ್ಬರ್ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ ಪಲ್ಟಿಯಾಗಿದ್ದು, ಪಲ್ಟಿಯಾದ ರಭಸಕ್ಕೆ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿಯಲ್ಲಿದ್ದ ರಬ್ಬರ್ ಎಲ್ಲಾ ಕಡೆ ಚದುರಿ ಹೋಗಿತ್ತು.
ಸ್ಥಳಕ್ಕೆ ಬೆಳ್ಳಾರೆ ಠಾಣಾ ಎಸ್.ಐ ಆಂಜನೇಯ ರೆಡ್ಡಿ ಆಗಮಿಸಿದ್ದು, ಗಂಭೀರ ಗಾಯಗೊಂಡಿದ್ದ ಚಾಲಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.