ನವದೆಹಲಿ: ಕೆಂಪು ಕೋಟೆ ಗಲಭೆಯ ಪ್ರಮುಖ ಆರೋಪಿ, ನಟ ದೀಪ್ ಸಿಧು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಸಿಧು, ಮಂಗಳವಾರ ದೆಹಲಿಯಿಂದ ಸ್ಕಾರ್ಪಿಯೋ ಕಾರಿನಲ್ಲಿ ಪಂಜಾಬ್ ಗೆ ಮರಳುತ್ತಿದ್ದರು. ವೆಸ್ಟ್‌ರ್ನ್ ಪೆರಿಪರಲ್ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಬರುತ್ತಿದ್ದ ಕಾರು ರಾತ್ರಿ 8.30ರ ಸಮಯಕ್ಕೆ ಸಿಘು ಗಡಿಯಲ್ಲಿ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದಾಗಿ ಗಂಭೀರ ಗಾಯಾಳುವಾಗಿದ್ದ ಸಿಧುವನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
2021ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಹೋರಾಟ ನಿರತ ರೈತರು ಕೆಂಪುಕೋಟೆ ಮೇಲೆ ದಾಳಿ ನಡೆಸಿದ್ದರು. ಆ ಪ್ರಕರಣದಲ್ಲಿ ಸಿಧು ಹೆಸರು ಪ್ರಮುಖವಾಗಿ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಅವರು ಜಾಮೀನು ಪಡೆದು ಹೊರ ಬಂದಿದ್ದರು.