ವಿಟ್ಲ: ಹಿಜಾಬ್ ಧರಿಸಿಕೊಂಡು ತರಗತಿಗೆ ಹಾಜರಾಗಲು ಪ್ರಾಂಶುಪಾಲರು ಅವಕಾಶ ನೀಡದ ಹಿನ್ನೆಲೆ 11 ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗದೇ ಮನೆಗೆ ಹಿಂತಿರುಗಿದ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 11 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ತರಗತಿಗೆ ಹೋಗಲು ಮುಂದಾಗಿದ್ದರು.
ಆದರೇ ಪ್ರಾಂಶುಪಾಲರು ಹಿಜಾಬ್ ಧರಿಸಿ, ತರಗತಿ ಒಳಗಡೆ ಹೋಗಬಾರದು, ಈ ಬಗ್ಗೆ ನ್ಯಾಯಾಲಯದ ಆದೇಶ ಕೂಡ ಇದೆ ಎಂದಿದ್ದಾರೆ. ಲೇಡಿಸ್ ಕೋಣೆಯಲ್ಲಿ ಕಳಚಿಟ್ಟು ಬಳಿಕ ತರಗತಿ ಹೋಗಬೇಕು ಎಂದು ಪ್ರಾಂಶುಪಾಲರು ತಿಳಿಸಿದ್ದರಿಂದ ವಿದ್ಯಾರ್ಥಿಗಳು ನೇರವಾಗಿ ಮನೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.