ಉಳ್ಳಾಲ: ಮುಡಿಪು ಬಳಿ ಐಟಿ ಸಂಸ್ಥೆಯೊಂದರ ಪ್ಲಂಬಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೂಲ್ಕಿ ಕಿಲ್ಪಾಡಿ ಎಣ್ಣೆಗೇಣಿ ನಿವಾಸಿ ರಾಜೇಶ್ ದೇವಾಡಿಗ (32) ಅವರು ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಎಂಟು ವರ್ಷಗಳಿಂದ ಸಂಸ್ಥೆಯ ಪ್ಲಂಬಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಖಾಲಿ ಇರುವ ಕಟ್ಟಡಕ್ಕೆ ತೆರಳಿದ್ದು, ವಾಪಸ್ ಬಂದಿರಲಿಲ್ಲ. ಬುಧವಾರ ಬೆಳಗ್ಗೆ ಕಟ್ಟಡದಿಂದ ಬಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

























