ಪುತ್ತೂರು: ಕೆಲ ದಿನಗಳಿಂದ ರಾಜ್ಯದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ಹಿಜಾಬ್ ವಿವಾದ ಇದೀಗ ದಕ್ಷಿಣ ಕನ್ನಡ ಕೆಲವು ಕಡೆ ಆವರಿಸಿದ್ದು, ಇದೀಗ ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜೊಂದಕ್ಕೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದಿದ್ದಾರೆ ಎಂದು ತಿಳಿದು ಬಂದಿದೆ.
ಹಿಜಾಬ್ ಧರಿಸಿ ತರಗತಿಯೊಳಗೆ ಪ್ರವೇಶ ನೀಡಲು ಕಾಲೇಜು ಪ್ರಾಂಶುಪಾಲರು ನಿರಾಕರಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಹೋಗಿದ್ದು, ಇದನ್ನು ನೋಡಿದ ಕೆಲವು ವಿದ್ಯಾರ್ಥಿಗಳು ಅವರಿಗೆ ಹಿಜಾಬ್ ಧರಿಸಿ ತರಗತಿಯಲ್ಲಿ ಕೂರಲು ಅವಕಾಶ ನೀಡಬೇಕೆಂದು ಕಾಲೇಜು ಆಡಳಿತ ಮಂಡಳಿಯೊಂದಿಗೆ ಕೇಳಿಕೊಂಡಿದ್ದು ಇದಕ್ಕೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಸ್ಥಿತಿ ಕೈಮೀರದಂತೆ ತಿಳಿಗೊಳಿಸಿದ್ದು, ಕಾಲೇಜಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.