ವಿಟ್ಲ: ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಶ್ರೀ ಮಹಾಲಕ್ಷ್ಮಿ, ವೀಠೋಭ ರುಕ್ಮಯಿ, ನಾಗದೇವರ ಪ್ರತಿಷ್ಠಾ ವರ್ಧಂತ್ಯುತ್ಸವವು ಫೆ.25 ರಂದು ನಡೆಯಲಿದೆ.
ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ವೇದಮೂರ್ತಿ ಕಮಲಾದೇವಿಪ್ರಸಾದ ಅಸ್ರಣ್ಣ ರವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಫೆ.25 ರಂದು ಸಾಮೂಹಿಕ ಪ್ರಾರ್ಥನೆ, ಗಣಯಾಗ, ಶ್ರೀ ದುರ್ಗಾ ಸಾನ್ನಿಧ್ಯದಲ್ಲಿ ನವಕ ಕಲಶಾಧಿವಾಸ ಹೋಮ, ಭಜನಾ ಸಂಕೀರ್ತನೆ, ಶ್ರೀ ಮಹಾಲಕ್ಷ್ಮಿ ಸಾನಿಧ್ಯದಲ್ಲಿ ಪಂಚವಿಂಶತಿ ಕಲಶಾಧಿವಾಸ, ನವಕ ಕಲಶಾಧಿವಾಸ ಹೋಮ, ನವಗ್ರಾಹರಾಧನೆ, ನವಚಂಡಿಕಾಯಾಗ, ಪ್ರಸನ್ನ ಮಹಾಪೂಜೆ, ಮಂತ್ರಾಕ್ಷತೆ, ಧಾರ್ಮಿಕ ಸಭೆ, ಅನ್ನಸಂತರ್ಪಣೆ, ಶ್ರೀ ದುರ್ಗಾ ನಮಸ್ಕಾರ ಪೂಜೆ, ನಾಗತನು ಪ್ರಸನ್ನ ಪೂಜೆ ಹಾಗೂ ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ, ಕಟೀಲು ಇವರಿಂದ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ನಡೆಯಲಿದೆ. ಫೆ.26 ರಂದು ಸೀಯಾಳಾಭಿಷೇಕ, ನಾಗದರ್ಶನ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.