ಬೆಂಗಳೂರು: ಬೇಡಿಕೆಗಳು ಈಡೇರದ ಹಿನ್ನೆಲೆ ಫೆ.21 ರಿಂದ ರಾಜ್ಯದಲ್ಲಿ ಅಂಗನವಾಡಿಗಳನ್ನು ಬಂದ್ ಮಾಡಿ ಮುಷ್ಕರ ನಡೆಸಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಮತ್ತು ಸಹಾಯಕಿಯರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು. ಸೇವಾ ಹಿರಿತನದ ಆಧಾರದ ಮೇಲೆ ಸಂಬಳವನ್ನು ಹೆಚ್ಚಿಸಬೇಕು ಈ ಹಿಂದೆ ಇಲಾಖೆಯಿಂದ ಸರ್ಕಾರಕ್ಕೆ ನೀಡಿರುವ ಮನವಿಯಂತೆ ನೀಡಬೇಕು. ರಾಷ್ಟ್ರೀಯ ಶಿಕ್ಷಣ ಯೋಜನೆಯಿಂದ ಎಲ್. ಕೆ. ಜಿ, ಯು. ಕೆ. ಜಿ. ಅಂಗನವಾಡಿಗಳಲ್ಲಿ ತೆರೆದು ಅಂಗನವಾಡಿ ಕಾರ್ಯಕರ್ತೆಯರನ್ನೇ ತೆಗೆದುಕೊಳ್ಳಬೇಕು. ನಿವೃತ್ತಿಯಾದ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಜೀವನ ನಡೆಸಲು(ಭತ್ತೆ) ಜಾರಿಗೆ ತರಬೇಕು. ಮಿನಿ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಬೇಡಿಕೆಯಲ್ಲಿ ತಿಳಿಸಿದ್ದಾರೆ.