ಬೆಳ್ತಂಗಡಿ: ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ನೇತ್ರಾವತಿ ನದಿಗೆ ಸ್ನಾನಕ್ಕೆಂದು ಹೋಗಿದ್ದ ಕಬಕದ ಯುವಕನೋರ್ವ ರವಿವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಇಂದು ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತ ಯುವಕ ಪುತ್ತೂರು ತಾಲೂಕು ಕಬಕ ನಿವಾಸಿ ಸುಂದರಿ ಎಂಬವರ ಪುತ್ರ ಕಿರಣ್(20) ಎಂದು ತಿಳಿದು ಬಂದಿದೆ.
ಕಿರಣ್ ತನ್ನ ಅಜ್ಜಿಮನೆ ಮುಂಡಾಜೆಯ ಪರಮುಖಕ್ಕೆ ಬಂದಿದ್ದ ಸಂದರ್ಭ ಸಹೋದರನ ಜೊತೆ ನದಿಗೆ ಹೋಗಿದ್ದು ಈ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ನಿನ್ನೆ ಸಂಜೆಯೇ ಧರ್ಮಸ್ಥಳ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದ್ದು ,ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿದರೂ ಫಲ ದೊರೆತಿರಲಿಲ್ಲ. ಇಂದು ಮತ್ತೆ ಕಾರ್ಯಾಚರಣೆ ಮುಂದುವರಿಸಿದಾಗ ಮೃತದೇಹ ಪತ್ತೆಯಾಗಿದೆ.