ಮಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ” ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ಖಂಡನೀಯ. ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹಸಚಿವರಾದ ಅರಗ ಜ್ಞಾನೇಂದ್ರ” ಅವರಲ್ಲಿ ಮನವಿ ಮಾಡುತ್ತೇನೆ.
“ಹಿಜಾಬ್ ವಿವಾದದ ನಡುವೆ ಇಂತಹ ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ” ಎಂದು ಹೇಳಿದ್ದಾರೆ.
ಕೊಲೆ ಪ್ರಕರಣದ ಓರ್ವ ಆರೋಪಿಯನ್ನು ಪೊಲೀಸರು ಇಂದು ಬಂಧಿಸಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿರುವುದು ಖಂಡನೀಯ.
— Nalinkumar Kateel (@nalinkateel) February 21, 2022
ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸಲು ಸನ್ಮಾನ ಸಿಎಂ @BSBommai ಹಾಗೂ ಮಾನ್ಯ ಗೃಹಸಚಿವರಾದ @JnanendraAraga ಅವರಲ್ಲಿ ಮನವಿ ಮಾಡುತ್ತೇನೆ.
ಹಿಜಾಬ್ ವಿವಾದದ ನಡುವೆ ಇಂತಹ ಕೃತ್ಯಗಳ ಮೂಲಕ ಸಮಾಜದಲ್ಲಿ ಶಾಂತಿ ಕದಡಲು ಯತ್ನ ನಡೆಯುತ್ತಿದೆ.