ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣವಾಗಿ ಐದು ಮಂದಿ ಕೃತ್ಯ ಎಸಗಿರುವುದು ಸಾಬೀತಾಗಿದ್ದು, ಅವರಲ್ಲಿ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯು ಶಿವಮೊಗ್ಗದ ಕ್ಲಾರ್ಕ್ ಪೇಟೆ ಮೂಲದವನಾಗಿದ್ದು, ದೊಡ್ಡಪೇಟೆ ಪೊಲೀಸರಿಂದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ವಿಚಾರಣೆ ವೇಳೆ ಆರೋಪಿಯು ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದಿದ್ದು, ಐದು ಮಂದಿ ಮಾರಕಾಸ್ತ್ರಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಉಳಿದ ನಾಲ್ವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.