ವಿಟ್ಲ: ತಾಲೂಕು ರಚನೆಯ ಬಗ್ಗೆ ವಿಟ್ಲ ತಾಲೂಕು ರಚನಾ ಸಮಿತಿಯ ಪದಾಧಿಕಾರಿಗಳು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ರವರ ನೇತೃತ್ವದಲ್ಲಿ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಬಸವರಾಜ ಬೊಮ್ಮಾಯಿ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಕಂದಾಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ತಾಲೂಕಾಗಿ ಘೋಷಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ರಚನಾ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಜೀವ ಭಂಡಾರಿ, ಶ್ರೀಕೃಷ್ಣ ವಿಟ್ಲ, ಪುನೀತ್ ಮಾಡತ್ತಾರ್, ಸಂಘಟನಾ ಕಾರ್ಯದರ್ಶಿಗಳಾದ ವಿಶ್ವನಾಥ ಎಂ ವೀರಕಂಭ, ಉದಯ ಕುಮಾರ್ ಆಲಂಗಾರು, ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಉಪಸ್ಥಿತರಿದ್ದರು.



























