ಶಿವಮೊಗ್ಗ: ದುಷ್ಕರ್ಮಿಗಳಿಂದ ಭಾನುವಾರ ರಾತ್ರಿ ಹತ್ಯೆಗೀಡಾಗಿದ್ದ ಹರ್ಷ ಶವಯಾತ್ರೆ ವೇಳೆ ಹಿಂಸಾಚಾರ ನಡೆದಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಸೆಕ್ಷನ್ 144 ನಡುವೆಯೂ ಆಸ್ಪತ್ರೆಯಿಂದ ಮನೆಗೆ ಶವಯಾತ್ರೆ ನಡೆಸುವ ವೇಳೆ ಅಹಿತಕರ ಘಟನೆಗಲು ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಬೀಸಿದ್ದಾರೆ. ಆಶ್ರುವಾಯು ಸಿಡಿಸಿ ಉದ್ರಿಕ್ತರನ್ನು ಚದುರಿಸಲು ಯತ್ನಿಸಿದ್ದಾರೆ.
ಕಲ್ಲು ತೂರಾಟದಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ.


























