ಪುತ್ತೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹಿಂದೂ ಪರ ಹೋರಾಟಗಾರ, ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಹಣಕಾಸಿನ ನೆರವಿನ ಅವಶ್ಯಕತೆ ಇದೆ ಹಾಗೂ ಹಿಂದೂ ಧರ್ಮಕ್ಕೆ ಹಗಲಿರುಳು ಶ್ರಮಿಸುತ್ತಿದ್ದ ಆತನ ಕುಟುಂಬಕ್ಕೆ ನೆರವಾಗಬೇಕು ಎಂಬ ದೃಷ್ಟಿಯಿಂದ ಪುತ್ತೂರಿನ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ತಮ್ಮ ಎರಡು ತಿಂಗಳ ಗೌರವಧನವನ್ನು ನೀಡಿದ್ದಾರೆ.
ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ರೈ ಕೇರಿ ರವರು ತಮ್ಮ ಎರಡು ತಿಂಗಳ ಗೌರವಧನವನ್ನು ಮೃತರಾದ ಹರ್ಷ ರವರ ಕುಟುಂಬಕ್ಕೆ ನೀಡಿ ಮಾನವೀಯತೆ ಮೆರೆದಿದ್ದಾರೆ.